ರಾಜ್ಯ ಸರ್ಕಾರ ಸ್ಥಳೀಯ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವ ನಿರ್ಧಾರಕ್ಕೆ ಎಎಪಿ ಪಕ್ಷ ಬೆಂಬಲ ವ್ಯಕ್ತಪಡಿಸಿದೆ.ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮತಗಳ್ಳತನ ನಡೆದಿರುವುದಕ್ಕೆ ಸಾಕ್ಷ್ಯಗಳಿದ್ದರೂ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಆರೋಪಿಸಿದರು. ಕೇಂದ್ರ ಚುನಾವಣಾ ಆಯೋಗವು ಆರೋಪಗಳ ಕುರಿತು ಸ್ಪಷ್ಟನೆ ನೀಡುವ ಬದಲು, ಆರೋಪ ಮಾಡಿದ ನಾಯಕರ ಮೇಲೆಯೇ ರಾಜಕೀಯ ಪ್ರತಿಕ್ರಿಯೆ ನೀಡುವ ಮೂಲಕ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಅವರು ದೂರಿದರು. ಈ ನಡೆಯಿಂದಾಗಿ ಚುನಾವಣೆ ಪ್ರಕ್ರಿಯೆಯ ಮೇಲಿನ ಜನರ ನಂಬಿಕೆ ಕುಸಿಯುತ್ತಿದೆ.ಆದ್ದರಿಂದ ಬ್ಯಾಲೆಟ್ ಪೇಪರ್ ಮೂಲಕ ಚು