ಕಳೆದ ಬಾರಿ ತುಮಕೂರು ದಸರಾ ಗೆ ಸರ್ಕಾರದಿಂದ 1 ಕೋಟಿ ಅನುದಾನ ನೀಡಲಾಗಿತ್ತು ಈ ಬಾರಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ತುಮಕೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ತುಮಕೂರು ದಸರಾ ಲಾಂಛನವನ್ನು ಕಳೆದ ಬಾರಿ ಬಿಡುಗಡೆ ಮಾಡಿದ್ದೇವೆ. ಯಾವುದೇ ರಾಜಕೀಯ ಪಕ್ಷ ಅಧಿಕಾರದಲ್ಲಿದ್ದರು ದಸರಾ ಆಚರಣೆಯನ್ನ ಪ್ರತಿ ವರ್ಷವು ಮುಂದುವರಿಸಿಕೊಂಡು ಹೋಗುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುದು ಎಂದರು.