ಯಲ್ಲಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ ಹೇಳಿದರು.ಅವರು ಸೋಮವಾರ ಪಟ್ಟಣದ ಕಾಳಮ್ಮಾನಗರ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಕ್ರೀಡಾದ್ವಜ ಹಾರಿಸಿಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದರು. ತಹಶೀಲ್ದಾರ ಚಂದ್ರಶೇಖರ ಹೊಸ್ಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ಕೆಲಸ ದಸರಾ ಕ್ರೀಡಾಕೂಟ ಮಾಡುತ್ತಿದೆ ಎಂದರು. ನೌಕರ ಸಂಘದ ತಾಲೂಕಾ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ,ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ ಇತರರು ಇದ್ದರು.