ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆ ಒಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿ ಹೆರಿಗೆಯಾಗಿರುವ ಘಟನೆ ಬುಧವಾರ ಮಧ್ಯಾನ ನಡೆದಿದೆ. ಘಟನೆಯ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕಳವಳ ವ್ಯಕ್ತಪಡಿಸಿ,ಆಯೋಗ ಸ್ವಯಂ ದೂರು ದಾಖಲು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ಘಟನೆ ಸ್ಥಳಕ್ಕೆ ಯಾದಗಿರಿ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿ.ಪಂ ಸಿಇಓ ಅವರು ಭೇಟಿ ನೀಡಿ ಪರಿಶೀಲಿಸಿದ್ದು. ಶಾಪುರ ತಾಲೂಕ ಆಸ್ಪತ್ರೆಯಲ್ಲಿ ತಾಯಿ ಮಗುವಿಗೆ ಹಾರೈಕೆ ಮಾಡಲಾಗುತ್ತಿದೆ.