ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ರಾಜ್ಯ ಅರಿಶಿನ ಬೆಳೆಗಾರರ ಒಕ್ಕೂಟ ಮತ್ತು ಸೂರ್ಯಕಾಂತಿ ಬೆಳೆಗಾರರ ವತಿಯಿಂದ ಅನಿರ್ಧಿಷ್ಠಾವಧಿ ಧರಣಿ ನಡೆಸಲಾಯಿತು. gಪಟ್ಟಣದ ಎಪಿಎಂಸಿ ಆವರಣದ ಮುಂದೆ ರಾಜ್ಯ ಅರಿಶಿನ ಬೆಳೆಗಾರರ ಒಕ್ಕೂಟ ಮತ್ತು ಸೂರ್ಯಕಾಂತಿ ಬೆಳೆಗಾರರು ಜಮಾಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ, ಜಿಲ್ಲಾಧಿಕಾರಿ ಹಾಗೂ ಎಪಿಎಂಸಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಅರಿಶಿನ ಬೆಳೆಗಾರರ ಒಕ್ಕೂಟ ನಾಗಾರ್ಜುನ್ ಕುಮಾರ್ ಮಾತನಾಡಿ, ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದೆ ಎಂದರು.