ಮುಂಜಾನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಬಳಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಯವರು ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾಯುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾಫಿ ಬಣ್ಣದ ಫಾರ್ಚುನರ್ ಕಾರು ಬಂದಿದ್ದು ಅದನ್ನು ಪರಿಶೀಲಿಸಲಾಗಿ ಸದರಿ ಕಾರಿನ ಒಳಗಡೆ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿದ್ದನ್ನು ಕಂಡಾಗ ಕಾರಿನ ಚಾಲಕ ಪೊಲೀಸರನ್ನು ಉದ್ದೇಶಿಸಿ ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ ಎಂದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.