ಹುಲಿ, ಚಿರತೆ ಉಪಟಳಕ್ಕೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನೇ ಬೋನಿನಲ್ಲಿ ಕೂಡಿ ಹಾಕಿ ಅಕ್ರೋಶ ಹೊರಹಾಕಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿಯನ್ನು ಸಿಬ್ಬಂದಿ ಬೋನಿನಲ್ಲಿ ಕೂಡಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ 2-3 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲೇ ಹುಲಿ ಹಾಗೂ ಚಿರತೆ ಓಡಾಟವಿದ್ದು ಅರಣ್ಯ ಇಲಾಖೆ ಗ್ರಾಮಸ್ಥರ ಸಮಸ್ಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಇಂದು ಹುಲಿ ಓಡಾಟದ ಬಗ್ಗೆ ಮಾಹಿತಿ ನೀಡಿದರೂ ತಡವಾಗಿ ಬಂದಿದ್ದರಿಂದ ಕೂಡಿ ಹಾಕಿದ್ದಾರೆ.