ನಗರದಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ರೀತಿಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಎಂಎಲ್‌ಸಿಗಳಾದ ಡಾ. ಚಂದ್ರಶೇಖರ್ ಪಾಟೀಲ, ಭೀಮರಾವ ಪಾಟೀಲ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ. ಸಿದ್ದು ಪಾಟೀಲ ಸಹ ಮಾತನಾಡಿದರು. ಹುಡುಗಿ ಹಿರೇಮಠದ ವಿರೂಪಾಕ್ಷ ಶಿವಾಚಾರ್ಯ ಮಹಾಸ್ವಾಮಿಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಶಿಕ್ಷಕರ ಸಂಘದ ಸಂಘಟನೆಯವರಿದ್ದರು.