ಗೊಲ್ಲನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ರೋಗ ನಿಯಂತ್ರಣ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಹಾಗೂ ಅವರ ತಂಡ ಬೇಟಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಈ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿ ವಿ ಗಿರೀಶ್ ಅವರು ಮಾತನಾಡಿದ್ದು ಚಿಕನ್‍ಗುನ್ಯಾ ಒಂದು ಸೋಂಕಿತ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಮನುಷ್ಯರನ್ನು ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ವೈರಸ್‍ನಿಂದ ಬರುವ ಒಂದು ಸಾಂಕ್ರಾಮಿಕ ರೋಗವಾಗಿದೆ. ಭಯ ಬೇಡ ಮುಂಜಾಗ್ರತೆ ಇರಲಿ ಎಂದು ಹೇಳಿದರು