ಯಲ್ಲಾಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಗ್ರೀನ್ ಕೇರ್ ಕಲಾತಂಡದ ಸಹಯೋಗದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ವಿಶ್ವ ಸ್ಕಿಜೋಪ್ರೇನಿಯಾ ದಿನದ ನಿಮಿತ್ತ ಬೀದಿ ನಾಟಕ ಜಾಗೃತಿ ಕಾರ್ಯಕ್ರಮ ವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್ ಉದ್ಘಾಟಿಸಿ ಮಾತನಾಡಿ, ಜನಸಂಖ್ಯೆ ತಡೆಗಟ್ಟುವ ಬಗ್ಗೆ ಹಾಗೂ ಸ್ಕಿಜೋಪ್ರೇನಿಯಾ ಕಾಯಿಲೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಡಿ ಜನಾರ್ದನ್ ಮಾತನಾಡಿ, ಇಂತಹ ಜನ ಜಾಗೃತಿ ಕಾರ್ಯಕ್ರಮಗಳಿಂದ ಯುವಜನರ ಮೇಲೆ ಒಳ್ಳೆಯ ಪ್ರಭಾವ ಬೀರುತ್ತದೆ ಎಂದರು.