ಹುಣಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಕೆಸ್ಸಾರ್ಟಿಸಿ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಓಡಿಸುತ್ತಿದ್ದ ಸೋಮಶೇಖರ್ ಎಡ ಭಾಗಕ್ಕೆ ಬಿದ್ದರೆ, ಹಿಂಬದಿ ಸವಾರ ಹಳ್ಳಿಕೆರೆ ಗ್ರಾಮದ ನಿವಾಸಿ ಶಿವಪ್ಪ(೬೪) ಚಕ್ರದ ಕೆಳಗಡೆ ಸಿಲುಕಿ ಅವರ ತಲೆ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದರು.