ಮದ್ದೂರು ತಾಲೂಕು ಕಚೇರಿ ಮುಂದೆ ಜಮಾಯಿಸಿದ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು, ಜಿ.ಟಿ.ದೇವೇಗೌಡ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಲಿತರಿಗೆ ಪ್ರಾತಿನಿಧ್ಯ ನೀಡಿದರೆ ಸಹಕಾರ ಕ್ಷೇತ್ರ ಸರ್ವನಾಶವಾಗುತ್ತದೆ ಎಂಬ ದಲಿತರ ಬಗ್ಗೆ ಕೀಳು ಮನೋಭಾವನೆ ಹೊಂದಿರುವ ಶಾಸಕ ಜಿ.ಟಿ.ದೇವೇಗೌಡರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸದಸ್ಯರು ಮದ್ದೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ದಲಿತರಿಗೆ ಪ್ರಾತಿನಿಧ್ಯ ನೀಡಿದರೆ ಸಹಕಾರ ಕ್ಷೇತ್ರ ಸರ್ವನಾಶವಾಗುವುದು. ಎಂದು ದಲಿತರ ಬಗ್ಗೆ ಈ ರೀತಿಯ ಕೀಳು ಮನೋಭಾವನೆಯನ್ನು ಹೊಂದಿರುವ ಮೂಲಕ ಸಮುದಾಯವ