ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಿದ ಗದ್ಯಾಳ ಗ್ರಾಮಕ್ಕೆ ಸಂಪರ್ಕ ಹೊಂದುವ ರಸ್ತೆಯು ಹದಗೆಟ್ಟ ಹೋಗಿದ್ದರಿಂದ ವಾಹನ ಸವಾರರು ತಮ್ಮ ಪ್ರಾಣವನ್ನು ಕೈ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ಗ್ರಾಮದ ರೈತ ಪರಶುರಾಮ ಸಾಠೆ ಅವರು ಆಕ್ರೋಶವನ್ನ ಹೊರ ಹಾಕಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗನೆ ಈ ರಸ್ತೆಯನ್ನು ದುರಸ್ತೆ ಮಾಡಿ ವಾಹನ ಸವಾರರಿಗೆ ಅನಕೂಲ ಮಾಡಬೇಕು ಎಂದು ಮನವಿ ಮಾಡಿದ್ದಾರೆ.