ವಿಜಯಪುರ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಮಧ್ಯಾನ 2ಗಂಟೆ ಸುಮಾರಿಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ರಮೇಶ್ ಜಿಗಜಿಣಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಿಕ್ಷಕರು ತಮ್ಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡುವಂತಹ ಕೆಲಸವಾಗಬೇಕು, ಪ್ರಶಸ್ತಿಗಾಗಿ ರಾಜಕಾರಣಿಗಳ ಲಾಭಿ ಮಾಡುವ ಕೆಲಸ ಬಿಡಬೇಕು ಎಂದು ಹೇಳಿದರು. ಶಿಕ್ಷಕರು ವಿದ್ಯಾರ್ಥಿಗಳ ಪಾಲಿನ ಎರಡನೇ ತಾಯಿಯಾಗಿ ಸೇವೆ ಸಲ್ಲಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಶಿಕ್ಷಕರು ಜನಪ್ರತಿನಿಧಿಗಳು ಅಧಿಕಾರಿಗಳು ಭಾಗಿಯಾಗಿದ್ದರು.