ಹಿರಿಯ ರಾಜಕಾರಣಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು, ಹಳಿಯಾಳ ಶಾಸಕರೂ ಆದ ಆರ್.ವಿ.ದೇಶಪಾಂಡೆ ಅವರು ಮಹಿಳೆಯರಿಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಮಾಜಿ ಶಾಸಕಿ ರೂಪಾಲಿ ನಾಯ್ಕ ಗುರುವಾರ ಸಂಜೆ 6ಕ್ಕೆ ಪ್ರಕಟಣೆ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ ಆರ್.ವಿ.ದೇಶಪಾಂಡೆ ರಾಜಕೀಯ ಸಾಮಾಜಿಕ ಜೀವನದಲ್ಲಿ ಅಪಾರ ಅನುಭವ ಇರುವವರು. ಜಿಲ್ಲೆಯ ಜ್ವಲಂತ ಸಮಸ್ಯೆ ಬಗ್ಗೆ ಹಿರಿಯ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ ಅದಕ್ಕೆ ಸಮಂಜಸವಾದ ಉತ್ತರ ನೀಡಬೇಕಿತ್ತು. ನಾನೂ ಒಬ್ಬ ಮಹಿಳೆಯಾಗಿ ದೇಶಪಾಂಡೆ ಅವರು ನೀಡಿರುವ ಉತ್ತರವನ್ನು ಖಂಡಿಸುತ್ತೇನೆ.