ಗುಂಡ್ಲುಪೇಟೆ ಪಟ್ಟಣದ ಪೇಟೆ ಬೀದಿ ದೊಡ್ಡ ಗಣಪತಿ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳನ್ನು ತಳಿರು, ತೋರಣಗಳಿಂದ ಅಲಂಕರಿಸಲಾಗಿತ್ತು. ಗಣಪತಿ ಮೂರ್ತಿಯನ್ನು ಅಲಂಕೃತ ಟ್ರ್ಯಾಕ್ಟರ್‍ನಲ್ಲಿ ಇರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಮಂಗಳವಾದ್ಯ, ಕೇರಳದ ಚೆಂಡೆ, ನಗಾರಿ ಸೇರಿದಂತೆ ಹಲವು ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಕೇಸರಿ ಶಲ್ಯ ತೊಟ್ಟ ಯುವಕರು ಪಟಾಕಿ ಸಿಡಿಸಿ, ಕಲಾ ತಂಡಗಳ ತಾಳಕ್ಕೆ ನೃತ್ಯ ಮಾಡಿ ಸಂಭ್ರಮಿಸಿದರು. ವಿವಿಧ ವೇಷಧಾರಿಗಳು ಮೆರವಣಿಗೆಗೆ ರಂಗು ತಂದರು.