ಉಡುಪಿ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬಬ್ಬುಕುದ್ರು, ನಗರಕ್ಕೆ ಸನಿಹ ವಾಗಿರುವ ಪಂಚಗಂಗಾವಳಿ ಕುಂದಾಪುರ ಕೋಡಿ, ಹಾಗೂ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ, ಭಾಗದ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಸಭೆಯಲ್ಲಿ ಸಲಹೆ ಸೂಚನೆ ನೀಡಲಾಗಿದೆ.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಕೆ,. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಕೆ.ಜಿ. ನಿಧೀಶ್, ಉಡುಪಿ ಅಪಾರ ಜಿಲ್ಲಾಧಿಕಾರಿ ಅಭಿದ ಗದ್ಯಾಳ, ಕುಂದಾಪುರ ಎಸಿ ರಶ್ಮಿ ಆರ್ ಹಾಗೂ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.