ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಾ ಬರಲಾಗುತ್ತಿದೆ, ಇಂದಿನ ಅದಾಲತ್ನಲ್ಲಿಯೂ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ಜಿಲ್ಲೆಯ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು, ವಿಚ್ಛೇಧನವನ್ನು ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರ