ರಾಜ್ಯದಲ್ಲಿನ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸುವಂತೆ ಆಗ್ರಹಿಸಿ ಎಐಡಿಎಸ್ಓ ಸಂಘಟನೆಯಿಂದ ಯಾದಗಿರಿ ಪ್ರತಿಭಟನೆ ನಡೆಸಲಾಯಿತು. ಸೋಮವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕರಾದ ಶಿಲ್ಪಾ ಬಿಕೆ ಹಾಗೂ ರಾಮಲಿಂಗಪ್ಪ ಬಿ ಎನ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತಿಥಿ ಉಪನ್ಯಾಸಕರ ನೇಮಕದ ಗೊಂದಲವನ್ನು ಪರಿಹರಿಸಿ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸಬೇಕು,ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.