ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಮುಳ್ಳಯ್ಯನಗಿರಿ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಾಹನಗಳ ಸಂಖ್ಯೆಯನ್ನು ಒಂದು ದಿನಕ್ಕೆ 1200ಕ್ಕೆ ನಿಗದಿಪಡಿಸಲಾಗಿದ್ದು. ಸ್ಥಳೀಯರು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಿ ಭಯಪಡುವುದು ಬೇಡ ಸ್ಥಳೀಯರು ಎಂದಿನಂತೆ ಓಡಾಡಬಹುದು ಆದರೆ ಆನ್ಲೈನ್ ನಲ್ಲಿ ಬುಕ್ಕಿಂಗ್ ಮಾಡುವವರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.