ಹನೂರು: ಧರ್ಮಸ್ಥಳ ಹಾಗೂ ಒಂದು ಕುಟುಂಬದ ವಿರುದ್ಧ ಅಪಪ್ರಚಾರ ನಡೆಸಿದ ಯೂಟ್ಯೂಬರ್ ಸಮೀರ್ ವಿರುದ್ಧ ಹನೂರು ಬಿಜೆಪಿ ಮಂಡಲ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅವರು ಹನೂರು ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು, "ಸಮೀರ್ ಸಮಾಜದಲ್ಲಿ ಅಶಾಂತಿ ಹಾಗೂ ಧಾರ್ಮಿಕ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಇದು ಧರ್ಮಸ್ಥಳದ ಗೌರವಕ್ಕೂ, ಸಮಾಜದ ಸಾಮರಸ್ಯಕ್ಕೂ ಧಕ್ಕೆಯಾಗಿದೆ ಈ ಕೂಡಲೆ ಯೂಟ್ಯೂಬರ್ ಸಮೀರ್ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು