ಯಲ್ಲಾಪುರ : ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೀಗಾರ - ಭಾಗಿನಕಟ್ಟಾ ರಸ್ತೆಯ ಪಕ್ಕದಲ್ಲಿ ಭೂಕುಸಿತವಾದ ಪ್ರದೇಶ ದಲ್ಲಿ ತಡೆ ಬೇಲಿನಿರ್ಮಿಸಿ, ಎಚ್ಚರಿಕೆಯ ಫಲಕ ಹಾಕಲಾಗಿದೆ. 20 ರಂದು ತಹಶೀಲ್ದಾರ್ ಚಂದ್ರಶೇಖರ್ ಹೊಸಮನಿ ತೆರಳಿ ಪರಿಶೀಲಿಸಿ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಂಭವನೀಯತೆ ಇರುವದರಿಂದ ಭಾರೀ ಗಾತ್ರದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.