ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕವ್ರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು. ರಾಮನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತವ್ರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದು.ಈಗ ಆಚೆ ಹೋಗಲು ಬೇಕು ಅಂತಾನೆ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸ್ತಿದ್ದಾರೆ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತೆ ಎಂದರು.