ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಶುಕ್ರವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಅಡುಗೆ ಕೇಂದ್ರ ಹಾಗೂ ಕೊಠಡಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ವಿತರಣೆ ಮಾಡಬೇಕು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಈ ವೇಳೆ ಅಂಗನವಾಡಿ ಕೇಂದ್ರದ ಮೇಲ್ವಿಚಾರಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.