ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಸಂಬAಧ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಪ್ರಮುಖ 35 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಒಳ ಹಾಗೂ ಹೊರ ಹೋಗುವ ವ್ಯಕ್ತಿ ಹಾಗೂ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಜಿಲ್ಲೆ ಹಾಗೂ ಠಾಣಾ ಮಟ್ಟದಲ್ಲಿ ರೌಡಿ ಹಾಗೂ ಮತೀಯ ಗೂಂಡಾಗಳ ಪೆರೇಡ್ ನಡೆಸಿ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಸೌಹಾರ್ದತೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ ಹಾಗೂ ಈಗಾಗಲೇ 25 ಜನ ರೌಡಿ ಮತ್ತು ಮತೀಯ ಗೂಂಡಾಗಳನ್ನು ಗಡಿಪಾರು ಮಾಡಲಾಗಿದೆ ಎಂದು ಸೋಮವಾರ ಸಂಜೆ 5 ಗಂಟೆಗೆ ದಾವಣಗೆರೆ ನಗರದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.