ಚಾಮರಾಜನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್ಪಿ ಡಾ.ಬಿ.ಟಿ. ಕವಿತಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯ ಮಹಿಳೆಗೆ ಯಾಮಾರಿಸಿ ಮೋಸ ಮಾಡಿದ ಆರೋಪ ಕೇಳಿ ಬಂದಿದೆ. ಉನ್ನತ ದರ್ಜೆಯ ಅಧಿಕಾರಿ, ಸಿ.ಎಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ನಂಬಿಸಿ ದ್ರೋಹ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸುಂಮತ್ ಬೆಂಗಳೂರಿನಲ್ಲಿ ಅಬಕಾರಿ ಉಪನಿರೀಕ್ಷಕ ಎಂದು ಸುಳ್ಳು ಹೇಳಿ ಎಂಗೇಜ್ ಮೆಂಟ್ ಕೂಡ ಮಾಡಿಕೊಂಡಿದ್ದಾನೆ. ಇತ ಈಗಾಗಲೇ ಮದುವೆಯಾಗಿದ್ದು ವಿಷಯ ಮುಚ್ಚಿಟ್ಟು ಎಂಗೇಜ್ಮೆಂಟ್ ಮಾಡಿಕೊಂಡು ಮೋಸ ಮಾಡಿದ್ದಾನೆಂದು ದೂರು ದಾಖಲಾಗಿದೆ ಎಂದು ತಿಳಿಸಿದರು