ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಲ್ಮಠದಲ್ಲಿ 50ನೇ ವರ್ಷದ ಸುವರ್ಣ ದಸರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪೂಜ್ಯರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಶುಕ್ರವಾರ ಮಧ್ಯಾನ ಮಾನ್ವಿ ಪಟ್ಟಣದ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಶಿಕ್ಷಕರಿಗೆ ಮನವಿ ಮಾಡಿ, 14 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿದಿನವೂ ವಿವಿಧ ರಂಗಗಳ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಕಾರ್ಯಕ್ರಮದ ರೂಪುರೇಷೆಯನ್ನು ತಯಾರಿಸಲಾಗಿದ್ದು ತಾವೆಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿಯನ್ನು ಮೂಡಿಸಲಾಯಿತು.