ಹಾವೇರಿ ಜಿಲ್ಲೆಯಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಹಾವೇರಿ ನಗರದ ರೈಲು ನಿಲ್ದಾಣದ ಬಳಿ ಇರುವ ನವದುರ್ಗೆಯರ ದೇವಸ್ಥಾನದಲ್ಲಿ ಸಂಭ್ರಮ ಇಮ್ಮಡಿಗೊಂಡಿದೆ. ಏಳನೇಯ ದಿನವಾದ ರವಿವಾರ ಕಾಳರಾತ್ರಿಗೆ ಪೂಜೆ ಸಲ್ಲಿಸಲಾಯಿತು. ಸಂಜೆ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆಸಲ್ಲಿಸಿದರು. ಇಷ್ಟಾರ್ಥ ಈಡೇರಿಸುವಂತೆ ಕಾಳರಾತ್ರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.