ಹುಬ್ಬಳ್ಳಿಯಲ್ಲಿ ಆಟೋ ಚಾಲಕ ಪ್ರಯಾಣಿಕರು ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ ನಗರದಲ್ಲಿ ಶ್ರಾವಣಿ ಎಂಬುವರು ತಮ್ಮ ಬ್ಯಾಗ್ ಮರೆತು ಆಟೋದಲ್ಲಿ ಬಿಟ್ಟು ಹೋಗಿದ್ದರು. ಅದನ್ನು ಗಮನಿಸಿದ ಆಟೋ ಚಾಲಕ ಮಂಜುನಾಥ್ ಮಳಗಿ ಎಂಬುವರು ತಕ್ಷಣ ಬ್ಯಾಗನ್ನು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗೆ ತಂದು ನೀಡಿದ್ದು. ವಾರಸುದಾರರಿಗೆ ಮರಳಿ ಹಸ್ತಾಂತರಿಸಲಾಗಿದೆ.