ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಕಂಡು ಕೇಳದಷ್ಟು ಅತಿವೃಷ್ಟಿಯಿಂದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಜಿಲ್ಲೆಯನ್ನ ಪ್ರಾಕೃತಿಕ ವಿಕೋಪವೆಂದು ಘೋಷಿಸಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಸೆ1 ರಂದು ಕಲಬುರಗಿಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಆರ್‌ಎಸ್ ಸಂಘಟನೆ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಹೇಳಿದ್ದಾರೆ.. ಆ29 ರಂದು ಮಧ್ಯಾನ 1 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿ ಸಂಪೂರ್ಣ ಬೆಳೆ ಹಾಳಾಗಿದ್ದು, ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಮಮಶೆಟ್ಟಿ ಆಗ್ರಹಿಸಿದ್ದಾರೆ..