ಹೋರಾಟಗಾರ ಚನ್ನಪ್ಪ ಆನೆಗುಂದಿ ಅವರ ಮೇಲೆ ಹೊಸಕೆರೆ ಗ್ರಾಮದ ವ್ಯಕ್ತಿ ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿದ್ದು ಅದನ್ನು ರದ್ದುಗೊಳಿಸುವಂತೆ ವಿವಿಧ ಸಾಮೂಹಿಕ ಸಂಘಟನೆಗಳ ಮುಖಂಡರು ಶಹಾಪುರ ನಗರಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಚೆನ್ನಪ್ಪ ಆನೆಗುಂದಿ, ಮಲ್ಲಿಕಾರ್ಜುನ ಸತ್ಯಂಪೇಟೆ, ಶರಣಪ್ಪ ಸಲಾದಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.