ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿಗೆ ಹೋಗುವ ರಸ್ತೆ ಹಲವು ವರ್ಷಗಳಿಂದ ಸರಿಯಾದ ಯೋಜನೆ ಮತ್ತು ಕಾಮಗಾರಿಗಳ ಕೊರತೆಯಿಂದಾಗಿ ಸೋಮವಾರ ಮಧ್ಯಾಹ್ನ 4 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಗೆ ಸಂಪೂರ್ಣವಾಗಿ ನೀರಿನಿಂದ ಆವೃತಗೊಂಡು ಕೆರೆಯಂತಾಗಿದೆ. ಇದರಿಂದಾಗಿ ಸಾರ್ವಜನಿಕರು, ವ್ಯಾಪಾರಸ್ಥರು ವಿದ್ಯಾರ್ಥಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.