ರಾಯಚೂರ ಸಮೀಪದ ಮಂತ್ರಾಲಯದಲ್ಲಿನ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಲಾಗಿದೆ.ಮಂಗಳವಾರ ಶ್ರೀಮಠದ ಪೀಠಾಧಿಪತಿಗಳಾದ ಶುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ ಮಣ್ಣಿನ ಗಣೇಶನ ಮೂರ್ತಿಯನ್ನು ಮಂಗಳವಾರ ಭಕ್ತರಿಗೆ ವಿತರಣೆ ಮಾಡಲಾಗಿತ್ತು ಬುಧವಾರ ಮಣ್ಣಿನ ಗಣಪನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಯನ್ನು ಅರ್ಪಿಸಲಾಯಿತು. ವಿಶೇಷ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಅನೇಕ ಜನ ಭಕ್ತರು ಕೂಡ ಪಾಲ್ಗೊಂಡಿದ್ದರು.