ಆಗಸ್ಟ್ 27 ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ 15 ರಂದು ಅಚರಿಸಲಿರುವ ಈದ್ ಮಿಲಾದ್ ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಧರ್ಮ ಬಂಧುಗಳ ಮೆರವಣಿಗೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಆಯ್ದ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ.