ಯುಎನ್‌ಸಿಸಿಡಿ ಮತ್ತು ಜಿ-20 ಗ್ಲೋಬಲ್ ಲ್ಯಾಂಡ್ ಇನಿಶಿಯೇಟಿವ್ ಆಶ್ರಯದಲ್ಲಿ ಈ ಜಾಗತಿಕ ಸಮಾವೇಶಆಯೋಜಿಸಲಾಗಿದೆ.ಇಲ್ಲಿ ವಿವಿಧ ದೇಶಗಳ ಕಾನೂನು ರೂಪಿಸುವವರನ್ನು ಒಂದುಗೂಡಿಸಲಿದೆ. ಸುಸ್ಥಿರ ಅಭಿವೃದ್ಧಿ, ಭೂ ರಕ್ಷಣೆ, ಹವಾಮಾನನಿರ್ವಹಣೆ ಮತ್ತು ನೀತಿಗಳ ಆವಿಷ್ಕಾರ ದಂತಹ ವಿಷಯಗಳ ಕುರಿತು ಚರ್ಚೆಯಾಗಲಿದೆ.ಪರಿಸರ ಸಂರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಗ್ರಾಮೀಣಾಭಿವೃದ್ಧಿ ಮತ್ತು ಸುಸ್ಥಿರ ಕೃಷಿಯಂತಹ ಕ್ಷೇತ್ರಗಳಿಗೆನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಈ ಅಂತರರಾಷ್ಟ್ರೀಯ ಸಮಾವೇಶಕ್ಕೆಆಹ್ವಾನಿಸಲಾಗಿದೆ. ಡಾ.ಕೆ.ಸುಧಾಕರ್ ಅವರು, ಈ ಆಹ್ವಾನ ಪಡೆದ ಭಾರತದ ಏಕೈಕ ಸಂಸದರಾಗಿದ್ದಾರೆ.