ಒಂದು ಕುಟುಂಬ ಸದೃಢವಾಗಿ ಆರ್ಥಿಕವಾಗಿ ಸಬಲಗೊಳ್ಳಲು ಮಹಿಳೆಯರ ಪಾತ್ರ ಅಪಾರವಾಗಿದೆ. ಗೃಹಿಣಿಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೆ ಸ್ವತಃ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಿ, ಇಂದು ಚಾಮುಂಡೇಶ್ವರಿ ಕಟಗೇರಿ ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟವು ಆತ್ಮನಿರ್ಭರ ಸಂಘಟನಾ ರಾಷ್ಟ್ರ ಪ್ರಶಸ್ತಿ ಗೆದ್ದಿರುವುದು ಸಂತೋಷದ ವಿಚಾರ ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರು ಜೆ.ಟಿ. ಪಾಟೀಲ ಪ್ರಶಂಸಿಸಿದರು.ಕಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನೂತನವಾಗಿ ನಿರ್ಮಿಸಿದ ಸಾವಿತ್ರಿಬಾಯಿ ಫುಲೆ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ‘ಸಂಜೀವಿನಿ’ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.