ನಿರಂತರ ಸುರಿಯುತ್ತಿರುವ ಮಳೆಯಿಂದ ಬೆಳೆಹಾನಿಯಾದ ಧಾರವಾಡ ತಾಲೂಕಿನ ವಿವಿಧ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಅಲ್ಲಿ ರೈತರು ಬೆಳೆದ ಹೆಸರು ಬೆಳೆ ವೀಕ್ಷಣೆ ಮಾಡಿ, ಮಾಹಿತಿ ಕಲೆ ಹಾಕಿತು. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ, ಬಿಜೆಪಿ ರೈತ ಮುಖಂಡ ಗಂಗಾಧರ ಪಾಟೀಲ ಕುಲಕರ್ಣಿ ಇದ್ದರು.