ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಬಂದಿರುವ ಸಂದರ್ಭದಲ್ಲಿ, ಜಿಲ್ಲೆಯ ರೈತರುಗಳಿಗೆ ಸುಳ್ಳು ಹೇಳಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಯ ರೈತರಗಳಿಗೆ ಒಂದು ವಾರದಲ್ಲಿ ಪರಿಹಾರ ಹಣವನ್ನು ಒದಗಿಸುತ್ತೇನೆ ಎಂದು ಹೇಳಿದ್ದಾರೆ. ರೈತರುಗಳಿಗೆ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ್ದಾರೆ. ರಾಜ್ಯ ಸರ್ಕಾರ ಕಳೆದ ಎರಡು ವರ್ಷದಲ್ಲಿ ಸುಳ್ಳು ಹೇಳಿಕೊಂಡೆ ಅಧಿಕಾರ ನಡೆಸುತ್ತಿದ್ದಾರೆ.ಕೂಡಲೇ ರೈತರುಗಳಿಗೆ ಪರಿಹಾರ ಹಣವನ್ನು ಒದಗಿಸಬೇಕು ಎಂದು ವಿಜಯಪುರದಲ್ಲಿ ಮಂಗಳವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆಗ್ರಹಿಸಿದರು.