ಕೆ ಆರ್ ಪೇಟೆ ತಾಲ್ಲೂಕಿನ ಗ್ರಾಮಪಂಚಾಯಿತಿಗಳಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಗ್ರಾಮಪಂಚಾಯಿತಿಗಳಲ್ಲಿ ಅವ್ಯವಹಾರಗಳು ನಡೆಯುತ್ತಿದ್ದು, ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳವಂತೆ ತಾಲ್ಲೂಕು ಪಂಚಾಯಿತಿಗೆ ಮುಖ್ಯಕಾರ್ಯನಿರ್ವಹಣಾಧಿಕಾರಿಗೆ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು. ಗ್ರಾಮಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಘಟಕದ ಅಧ್ಯಕ್ಷ ವೇಣು ಅವರ ನೇತೃತ್ವದಲ್ಲಿ ಪ್ರತಿಭಟಿಸಿ ಇ-ಸ್ವತ್ತು ಮಾಡಿಕೊಡಲು ನರೇಗ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಸೂಕ್ತ ತನಿಖೆಗೆ ಕ್ರಮಕೈಗೊಳ್ಳ