ಕರ್ನಾಟಕ ರೆಡ್ಡಿ ಜನ ಸಂಘದ ಶತಮಾನೋತ್ಸವ ಸಂಭ್ರಮ ಸಮಾರಂಭವು ಸೆಪ್ಟಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ಗಾಯತ್ರಿ ವಿಹಾರ್ ನಲ್ಲಿ ನಡೆಯಲಿದೆ. ಈ ಬಗ್ಗೆ ದಾವಣಗೆರೆ ಎರೆ ಹೊಸಹಳ್ಳಿ ರೆಡ್ಡಿ ಗುರು ಪೀಠದ ವೇಮನಾನಂದ ಸ್ವಾಮೀಜಿ ತಿಳಿಸಿದರು. ತುಮಕೂರಿನ ಕ್ಯಾತಸಂದ್ರದ ಜಾಸ್ ಟೋಲ್ ಬಳಿ ಇರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಬೆಳಿಗ್ಗೆ 10 ರ ಸಮಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಕಾರ್ಯಕ್ರಮ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾನೂನು ನ್ಯಾಯ ಮಾನವ ಹಕ್ಕುಗಳ ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗ ವಹಿಸುವ ಬಗ್ಗೆ ಅವರು ಮಾಹಿತಿ ನೀಡಿದರು.