ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.