ಬೀದರ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಇಂದು ಭೇಟಿ ಮಾಡಿ, ಅನುಭವ ಮಂಟಪದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ನಾಡೋಜ ಡಾ ಬಸವಲಿಂಗ ಪಟ್ಟದ್ದೇವರ ಅಮ್ಮತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಶಶಿಧರ ಕೋಸಂಬೆ ಇದ್ದರು.