ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವದನ್ನು ಕೈಬಿಟ್ಟು ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿಯ ಸದಸ್ಯರು ನಾಗಠಾಣ ಮೀಸಲು ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಅವರಿಗೆ ಮನವಿ ಸಲ್ಲಿಸಿದರು. ಶಾಸಕರು ಈ ವಿಚಾರವನ್ನು ಸಿಎಂ ಸೇರಿದಂತೆ ಸಂಬಂಧ ಪಟ್ಟ ಸಚಿವರ ಗಮನಕ್ಕೆ ತರಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ ಭಗವಾನ್ ರೆಡ್ಡಿ ಸೇರಿದಂತೆ ಹಲವರಿದ್ದರು