ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ನಗರದ ಅಜಾದ್ ಮಸೀದಿ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಹಾಜಿ ಸಯ್ಯದ್ ಇನ್ಸಾಲ್ ಸಾಬ್ ಇಸ್ಲಾಂ ಧರ್ಮದ ಧ್ವಜಾರೋಹಣ ಮಾಡುವ ಮೂಲಕ ಗುರುವಾರ ಮಧ್ಯಾಹ್ನ 2 ಗಂಟೆಗೆ ಚಾಲನೆ ನೀಡಿದರು. ನಂತರ ಮೆರವಣಿಗೆ ಅಶೋಕ್ ರಸ್ತೆ ಮಾರ್ಗವಾಗಿ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಮಾರಿಕಾಂಬಾ ದೇವಸ್ಥಾನ ಎದರು ಶಾಂತಿಯುತವಾಗಿ ಸಾಗಿತು. ಇನ್ನು ಮೆರವಣಿಗೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಜರಿದ್ದರು