ಹಾನಿ ಆಧರಿಸಿ, ಅಧಿಕಾರಿಗಳು ನೀಡುವ ವರದಿಯನ್ನು ಪರಿಶೀಲಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನಿಸಲಾಗುವುದು ಎಂದು ಸಚಿವ ರಹೀಮ್ ಖಾನ್ ಅವರು ತಿಳಿಸಿದರು. ಸತತ ಮಳೆ ಹಿನ್ನೆಲೆಯಲ್ಲಿ ವಿವಿಧೆಡೆ ಸಂಚರಿಸಿ ಬೆಳೆಹಾನಿ ಪರಿಶೀಲಿಸಿದ ಬಳಿಕ ಹಳೆಂಬರದಲ್ಲಿ ಶುಕ್ರವಾರ ಮಧ್ಯಾಹ್ನ 1:30ಕ್ಕೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.