ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವ ಸಮೂಹವನ್ನು ನಿರುದ್ಯೋಗ ಸಮಸ್ಯೆಯಿಂದ ಮುಕ್ತಿ ಕಾಣಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್ ನ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಸದಸ್ಯರು ಉದ್ಯೋಗ ಬೇಕೆಂದು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಆರ್.ರಾಚಪ್ಪಾಜಿ ಮಾತನಾಡಿ, ಸುಮಾರು ಆರೂವರೆ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಡಗು ಜಿಲ್ಲೆಯ ಕಾರ್ಮಿಕ ವರ್ಗ, ಸಣ್ಣ ರೈತರು, ಮಧ್ಯಮ ವರ್ಗದ ಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯ ಸರಕಾರಿ ಕಚೇರಿಗಳಿಗೆ ಭ