ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಬೆಳಗ್ಗೆ ತಾಲೂಕ ಆಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ತಹಸಿಲ್ದಾರ್ ಹುಸೇನ್ ಸಾಬ್ ಸರಕಾವಸ್ ಅವರು ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಜಯಂತಿ ಆಚರಿಸಲಾಯಿತು. ಸಮುದಾಯದ ಅನೇಕ ಮುಖಂಡರು ತಹಸಿಲ್ದಾರ್ ಕಚೇರಿಯ ಸಿರಸ್ತೆದಾರರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.