ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಜಂಕ್ಷನ್‌ನಲ್ಲಿ ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ನಡೆದ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. ಇದೇ ವೇಳೆ ಸುತ್ತೂರು ಮಠದ ದೇಶಿಕೇಂದ್ರ ಸ್ವಾಮೀಜಿಗಳು, ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಗಳು, ಬಸವ ಧರ್ಮ ಪೀಠದ ಮಾತೆ ಗಂಗಾ ದೇವಿಯವರು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ ರೇವಣ್ಣ, ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್, ಕೆ.ಗೋಪಾಲಯ್ಯ, ಮಾಜಿ ಮೇಯರ್ ಗಂಗಾಬಿಕಾ ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.