ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷರು ಮತ್ತು ಗಂಗಾಮತ ಸಮಾಜದ ಯುವ ಮುಖಂಡ ತಲಕಾಯ ಮಾರೆಪ್ಪ ಅವರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೆ.6 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಣೆ ನೀಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಅವರ ಸಮಾಜ ಸೇವೆ ವ್ಯಾಪ್ತಿಯನ್ನು ರಾಜಕಾರಣದಲ್ಲಿಯೂ ಮುಂದುವರಿಸಲು ನಿರ್ಧರಿಸಿದ್ದಾರೆ. ಜನರು ಆಶೀರ್ವದಿಸಿ ಸಮಾಜ ಸೇವೆಗೆ ಶಕ್ತಿ ತುಂಬುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಪಂಚ ಗ್ಯಾರೆಂಟಿಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲಗಳಾಗುತ್ತಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸು ಬಲಪಡೆದುಕೊಂಡಿದೆ. ರಾಜ್ಯ ಕೆಪಿಸಿಸ