ಮೊಳಕಾಲ್ಮುರು:- ಲೋಕಸಭಾ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮತ ಕಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಎಂದು ಶಾಸಕರಾದ ಎನ್ ವೈ ಗೋಪಾಲಕೃಷ್ಣ ಆರೋಪಿಸಿದ್ದಾರೆ. ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ 12:30ಕ್ಕೆ ಮೊಳಕಾಲ್ಮೂರು ಮತ್ತು ತಳಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಹಕ್ಕುಗಳಗಾಗಿ ಸಹಿ ಸಂಗ್ರಹಿಸಿ ಜನಾದೇಶದ ಕಗ್ಗೊಲೆ ನಿಲ್ಲಿಸಬೇಕು ಎಂಬ ಕಾರ್ಯಕ್ರಮದಲ್ಲಿ ಸಹಿ ಸಂಗ್ರಹಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತಾಡಿದರು.